ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಮ ದಾಖಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯಿಂದ ನೋಟಿಸ್ ಕೂಡ ನೀಡಲಾಗಿದೆ. ಇಂತಹ ಕ್ರಮವನ್ನು ನಟ ಚೇತನ್ ಅಹಿಂದಾ ವ್ಯಂಗ್ಯವಾಡಿದ್ದಾರೆ. ಅದೇ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಐಡಿ ಕ್ರಮ ಕೈಗೊಳ್ಳುವುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂಬುದಾಗಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಕ್ಷಾದಗಳು ಸಿಕ್ಕಿದ್ದರೆ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರನ್ನು ಪೋಕ್ಸೊ ಆರೋಪದ ಮೇಲೆ ಬಂಧಿಸಬಹುದು ಎಂದಿದ್ದಾರೆ.
ಅಂತಹ ಉನ್ನತ ಮಟ್ಟದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಕ್ರಮ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂಬುದಾಗಿ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ, ಕರ್ನಾಟಕ ಪೊಲೀಸರು ನಿಜವಾಗಿಯೂ ಗಮನಾರ್ಹವಾದ ಕೆಲಸವನ್ನು ಮಾಡುತ್ತಿದ್ದಾರೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) June 13, 2024