ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಂದೆ ಕೇಂದ್ರ ಸಚಿವರಾದ ಬಳಿಕ, ತೆರವಾದಂತ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸ್ಪರ್ಧಿಸೋದು ಫಿಕ್ಸ್ ಎನ್ನಲಾಗುತ್ತಿದೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸುಳಿವು ನೀಡಿರುವಂತ ನಿಖಿಲ್ ಕುಮಾರ್ ಅವರು, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಅವರು ತಿಳಿಸಿದರು.
BREAKING: ‘ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ’ಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ | BS Yediyurappa