ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಒಂದು ಪ್ರಕರಣದಲ್ಲಿ ನನಗೆ ಯಾವ ಒತ್ತಡವು ಕೂಡ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ಒತ್ತಡ ಆರೋಪದ ವಿಚಾರವಾಗಿ ಮಾತನಾಡಿದ ಅವರು, ನನ್ನೊಂದಿಗೆ ಯಾರು ಮಾತಾಡಿಲ್ಲ. ನನಗೆ ಯಾವ ಒತ್ತಡ ಕೂಡ ಇಲ್ಲ. ಘಟನೆ ನಡೆದ 24 ಗಂಟೆ ಆದಮೇಲೆ ನನಗೆ ಈ ವಿಚಾರ ಗೊತ್ತಾಗಿದೆ. ವಿಷಯ ತಿಳಿದು ನಾನು ಮಾತನಾಡುತ್ತೇನೆ. ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.