ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ದರ್ಶನ್ ಪುತ್ರ ವಿನೀಶ್ ಕೂಡ ಪೋಸ್ಟ್ ಹಂಚಿಕೊಂಡಿದ್ದು, ಕೆಟ್ಟದಾಗಿ ಕಮೆಂಟ್ಸ್ ಹಾಕಿದವರಿಗೆ ತಿರುಗೇಟು ನೀಡಿದ್ದಾರೆ.
ಇನ್ನೊಂದಡೆ ಪತಿಯ ಒಂದು ಕೃತ್ಯದಿಂದ ಬೇಸತ್ತು ಪತ್ನಿ ವಿಜಯಲಕ್ಷ್ಮಿ ಕೂಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅವರ ಜೊತೆಗಿದ್ದ ಫೋಟೋ ರಿಮೂವ್ ಮಾಡಿದ್ದು ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇದರ ನಡುವೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ 15 ವರ್ಷದ ವಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಗಮನಸೆಳೆದಿದೆ. ಅವರಿಗೆ ಬರುತ್ತಿರುವ ಸೋಶಿಯಲ್ ಮೀಡಿಯಾ ಒತ್ತಡ ಹಾಗೂ ಕೆಟ್ಟ ಕಾಮೆಂಟ್‌ಗಳ ಬಗ್ಗೆ ಅವರು ಬರೆದುಕೊಂಡಿದ್ದಾರೆ.
ವಿನೀಶ್ ಇನ್ಸ್‌ಟಾಗ್ರಾಮ್ ಸ್ಟೋರಿ ಹಂಚಿಕೊಂಡಿದ್ದಾರೆ.’ ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ, ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಯಾವ ಬದಲಾವಣೆಯೂ ಆಗೋದಿಲ್ಲ’ ಎಂದು ವಿನೇಶ್ ಬರೆದುಕೊಂಡಿದ್ದಾರೆ. ಎಲ್ಲರಿಗೂ ಥ್ಯಾಂಕ್ಸ್ ಎಂದು ಕೆಳಗೆ ಇಮೋಜಿಯನ್ನೂ ಕೂಡ ಹಂಚಿಕೊಂಡಿದ್ದಾರೆ.
ತನ್ನ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ನಲ್ಲಿ ದರ್ಶನ್ ಅವರು ತಮ್ಮ ಸಹಚರರೊಂದಿಗೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳನ್ನು ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.