ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಅಂಧರೆ 6-7, 8 ತರಗತಿ ಶಾಲೆಗಳನ್ನಾಗಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ 7ನೇ ತರಗತಿಯನ್ನು 8ನೇ ತರಗತಿಯಾಗಿ ಉನ್ನತೀಕರಿಸಿ ಪ್ರಾರಂಭಿಸುವ ಬಗ್ಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜ್ಞಾಪನ ಹೊರಡಿಸಿದ್ದು, ರಾಜ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗೆ ಅಂದರೆ 6 ರಿಂದ 7ನೇ ತರಗತಿ ಉನ್ನತೀಕರಣಕ್ಕಾಗಿ 145 ಶಾಲೆಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇವುಗಳಲ್ಲಿ 55 ಶಾಲೆಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದಿದ್ದಾರೆ.
ಇನ್ನೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಉನ್ನತೀಕರಿಸಿ ಪ್ರಾರಂಭಿಸೋದಕ್ಕಾಗಿ 41 ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಹೀಗಾಗಿ ಉನ್ನತೀಕರಿಸಿದ ಶಾಲೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯದ ಯಾವೆಲ್ಲ ಶಾಲೆ ಉನ್ನತೀಕರಣ ಎನ್ನುವ ಪಟ್ಟಿ ಈ ಕೆಳಗಿದೆ
BREAKING: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 90 ಲಕ್ಷ ವಂಚನೆ ಪ್ರಕರಣ: ತನಿಖೆಗೆ ಕೋರ್ಟ್ ಆದೇಶ