ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಏನಾಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ಸಿಕ್ಕಿದ್ದು, ಆರೋಪಿಗಳು 94.73 ಕೋಟಿ ರೂ. ಹಣವನ್ನುಬಾರ್, ವೈನ್ ಶಾಪ್, ಚಿನ್ನದ ಮಳಿಗೆಗಳು ಹಾಗೂ ಸಣ್ಣಸಣ್ಣ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂಬ ಸ್ಪೋಟಕ. ಮಾಹಿತಿ ಬಹಿರಂಗವಾಗಿದೆ.
ಈ ಒಂದು ಪ್ರಕರಣದಲ್ಲಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಗಳಾದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್ ಎಂಬವರನ್ನು ಎಸ್ಐಟಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಪೊಲೀಸರು ಬಂಧಿಸಿದ್ದು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತನೇ 18 ನಕಲಿ ಖಾತೆಗಳನ್ನು ತೆರೆದು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ತಿಳಿದು ಬಂದಿದೆ.
ಸತ್ಯನಾರಾಯಣನನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿದಾಗ ಆತನ ಸಂಬಂಧಿ ಒಬ್ಬರ ಮನೆಯಲ್ಲಿ 4 ಸೂಟ್ ಕೇಸ್ ನಲ್ಲಿ ಹಣ ಪತ್ತೆಯಾಗಿದ್ದು ಅದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.8.21 ಕೋಟಿ ರೂ. ಹಣ, ಸೇರಿದಂತೆ ಆತನ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಇದುವರೆಗೂ 11.83 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.