ಶಿವಮೊಗ್ಗ: 2024-25ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ 08 ಅಭ್ಯರ್ಥಿಗಳಿಗೆ ಶಿಷ್ಯ ವೇತನ ನೀಡುವ ಸಲುವಾಗಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ www.twd.karnataka.gov.in ಜಾಲತಾಣದ ಮೂಲಕ ಜೂನ್ 18 ರಿಂದ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಇಲ್ಲಿಗೆ ಆಗಸ್ಟ್ 02 ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ. ಸಂ.: 08182-279222 / 9482762350 ಗಳನ್ನು ಸಂಪರ್ಕಿಸುವುದು.
BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting
BREAKING: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 90 ಲಕ್ಷ ವಂಚನೆ ಪ್ರಕರಣ: ತನಿಖೆಗೆ ಕೋರ್ಟ್ ಆದೇಶ