ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇದೀಗ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.ಹಾಗಾಗಿ ಕೆಲ ಹೊತ್ತಿನಲ್ಲಿ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ ನ್ಯಾ. ಕೃಷ್ಣ ಎಸ್ ದೀಕ್ಷಿತರ ಪೀಠವು ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಕುರಿತು ವಿಚಾರಣೆ ನಡೆಸಲಿದ್ದಾರೆ.
ಹೌದು ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ ಇರುವುದರಿಂದ ನೀರಿಕ್ಷಣಾ ಜಾಮೀನು ಕೋರಿಯು ಕೂಡ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ, ಇದರ ಬಳಿಕ ಇದೀಗ ಆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.
ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.