ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಕೆಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ಮಾಹಿತಿ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು ದಿನಾಂಕ 15-06-2024ರಂದು ಶಿರಾಳಕೊಪ್ಪ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್ ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ತಿಳಿಸಿದೆ.
ಈ ಹಿನ್ನಲೆಯಲ್ಲಿ ನಾಳೆ ದಿನಾಂಕ 15-06-2024ರಂದು ಶಿರಾಳಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕವಡಿ, ಬೆಳವಾಣಿ, ಜಿರಲೇಕೊಪ್ಪ ಮತ್ತು ಚಿಕ್ಕಸವಿ ಎನ್ ಜೆವೈ ಫೀಡರ್ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಿರಾಳಕೊಪ್ಪ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಈ ಮೇಲ್ಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೊರಬ ಮೆಸ್ಕಾಂ ಎಇ ಮನವಿ ಮಾಡಿದ್ದಾರೆ.
BIG UPDATE: ಇಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್
ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ