ಬೆಂಗಳೂರು : ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬೃಹತ್ ಸಂಖ್ಯೆಯಲ್ಲಿ ಸೇರಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಜೆಡಿಎಸ್ ಮುಗಿಸಿದ್ದೇವೆ ಅಂತ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ. ದುರಹಂಕಾರದಲ್ಲಿ ಮಾತನಾಡಿದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ.ನಾಲ್ಕು ದಿನದ ದೆಹಲಿಯಲ್ಲಿ ಕೆಲಸ ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ನಮ್ಮ ಸ್ವಯಂಕೃತ ಅಪರಾಧದಿಂದ ಎರಡು ಕ್ಷೇತ್ರಗಳಲ್ಲಿ ಸೋತಿದ್ದೇವೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು
ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭರ್ಜರಿಯಾಗಿ ಗೆಲುವು ದಾಖಲಿಸಿದ ನಂತರ, ಮೋದಿಯವರ ಸಂಪುಟ ಸಭೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿ ಇಂದು ಬೆಂಗಳೂರಿಗೆ ಆಗಮಿಸಿದ ನಂತರ ಮಾತನಾಡಿದ ಅವರು, ಮೋದಿ ಸಂಪುಟದಲ್ಲಿ ಸೇವೆ ಮಾಡಲು ಅವಕಾಶ ಸಿಕ್ಕಿದೆ ನಾಲ್ಕು ದಿನ ದೆಹಲಿ ಎರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ಎಂದು ತಿಳಿಸಿದರು.