ಬೆಂಗಳೂರು : ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್ಸಿನ ಇ.ತುಕಾರಾಂ ಅವರು ಇಂದು ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ಇ. ತುಕಾರಾಮ್ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಹೌದು ಇ ತುಕಾರಾಂ ಅವರು ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಕಾರಣಕ್ಕೆ ಶಾಸಕ ಸ್ಥಾನಕ್ಕೆ ಇದೀಗ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇ ತುಕಾರಾಂ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಶಾಸಕರಾಗಿದ್ದರು. ಇಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ಈ ತುಕಾರಾಂ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇ ತುಕಾರಾಂ ಇದೀಗ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿದ್ದಾರೆ.