ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣಾ ನೀತಿ ಸಂಹಿತೆ ತೆರವಿನ ಕೆಲ ದಿನಗಳ ನಂತ್ರ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿ ಹಾಗೂ ಓರ್ವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ., ಐಎಎಸ್ (ಕೆಎನ್: 1995) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.
ಇನ್ನೂ ಹರ್ಷ ಗುಪ್ತಾ, ಐಎಎಸ್ (ಕೆಎನ್: 1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ವಿಪುಲ್ ಬನ್ಸಾಲ್, ಐಎಎಸ್ (ಕೆಎನ್: 2005) ಅವರನ್ನು 29.06.2024 ರಂದು ಬೆಂಗಳೂರಿನ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಎಂಎಸ್ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಮಣದೀಪ್ ಚೌಧರಿ, ಐಎಎಸ್ (ಕೆಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕುಮಾರ್ ಟಿ.ಎಚ್.ಎಂ., ಐಎಎಸ್ (ಕೆ.ಎನ್: 2008), ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಬೆಂಗಳೂರು ಅವರನ್ನು ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕ, ಬೆಂಗಳೂರು ಅವರ ಹುದ್ದೆಯ ಸಮಕಾಲೀನ ಉಸ್ತುವಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಸಿದೆ. ಈ ಸ್ಥಾನದಲ್ಲಿದ್ದಂತ DN. ಶ್ರೀಧರ, ಐಎಎಸ್ ಅಧಿಕಾರಿ ವರ್ಗಾವಣೆ ಮಾಡಿದೆ.
ಓರ್ವ ಐಪಿಎಸ್ ಅಧಿಕಾರಿ ವರ್ಗಾವಣೆ
ಬೆಂಗಳೂರು ನಗರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಡಿ.ದೇವರಾಜ್, ಐಪಿಎಸ್ (ಕೆಎನ್-2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ. ಕುಲದೀಪ್ ಕುಮಾರ್ ಆರ್ ಜೈನ್, ಐಪಿಎಸ್ ವರ್ಗಾವಣೆ ಮಾಡಿದೆ.
ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ನಾಸಾದಿಂದ ದೊಡ್ಡ ಎಚ್ಚರಿಕೆ! ಅತಿವೇಗದಲ್ಲಿ ಭೂಮಿಯತ್ತ ಬರುತ್ತಿದೆ ಕ್ಷುದ್ರಗ್ರಹ 2024 ಎಲ್ಎಲ್1 | NASA Alert