ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ( PDO) ವೃಂದದ ರಾಜ್ಯ ಮಟ್ಟದ ಕರಡು ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದದ ದಿನಾಂಕ: 31.12.2011ರಲ್ಲಿದ್ದಂತೆ, ಅಂತಿಮ ಜೇಷ್ಟತಾ ಪಟ್ಟಿಯನ್ನು ಉಲ್ಲೇಖಿತ (1)ರ ಸರ್ಕಾರದ ಆದೇಶದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ.
ಜೇಷ್ಕೃತೆ ನಿರ್ಧರಣೆ ಸಂಬಂಧವಾಗಿ ಬಾಧಿತರಾದ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಹಲವು ರಿಟ್ ಅರ್ಜಿಗಳನ್ನು ಸಲ್ಲಿಸಿ ಪ್ರಶ್ನಿಸಿದ್ದರು. ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (ORE DEF GEF 26196 of 2019, 33613 of 2019, 201903 of 2019, 224 of 2021, 200780 of 2022, 3036 of 2023) O: 22.06.2023 dow ಹೊರಡಿರುವ ಆದೇಶದಲ್ಲಿ ದಿನಾಂಕ: 21.04.2014ರಲ್ಲಿ ಪುಕಟಿಸಿದ ಜೇಷ್ಯತಾ ಪಟ್ಟಿಯನ್ನು ರದ್ದುಗೊಳಿಸಿ, ಆಯುಕ್ತರು, ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪುಸ್ತುತ ಜಾರಿಯಲ್ಲಿರುವ ನಿಯಮಾವಳಿಗಳನುಸಾರ ಜೇಷ್ಟತಾ ಪಟ್ಟಿಯನ್ನು ಸಿದ್ಧಪಡಿಸಿ ಪುಕಟಿಸಲು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಿರುತ್ತದೆ ಎಂದಿದ್ದಾರೆ.
ದಿನಾಂಕ: 07.07.2023ರ ಸರ್ಕಾರದ ಆದೇಶದಲ್ಲಿ ಆಯುಕ್ತರು, ಪಂಚಾಯತ್ ರಾಜ್, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (S-KSAT) (HORE DEF GEF 26196 of 2019 (S-KSAT), 33613 of 2019 (S-KSAT), 201903 of 2019(S-KSAT), 224 of 2021(S-KSAT), 200780 of 2022 (S- KSAT), 3036 of 2023 (S-KSAT)) : 22.06.2023 do Lo ಆದೇಶದಲ್ಲಿ ದಿನಾಂಕ: 21.04.2014ರಲ್ಲಿ ಪಕಟಿಸಿದ ಜೇಷ್ಟತಾ ಪಟ್ಟಿಯನ್ನು ರದ್ದುಗೊಳಿಸಿ, ಆಯುಕ್ತರು, ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಪ್ರಸ್ತುತ ಜಾರಿಯಲ್ಲಿರುವ ನಿಯಮಾವಳಿಗಳನುಸಾರ ಜೇಷ್ಯತಾ ಪಟ್ಟಿಯನ್ನು ಸಿದ್ಧಪಡಿಸಿ ಪುಕಟಿಸಲು ಸರ್ಕಾರಕ್ಕೆ ಸಲ್ಲಿಸುವಂತೆ ಮೂರು ವಾರಗಳ ಗಡವು ವಿಧಿಸಿ ಆದೇಶಿಸಿರುತ್ತದೆ. ಮುಂದುವರೆದು, ಜೇಷ್ಠತಾ ಪಟ್ಟಿ ಸಿದ್ಧತೆಗೆ ಅಗಾಧವಾದ ಪ್ರಕ್ರಿಯೆ ಒಳಗೊಂಡಿರುವುದರಿಂದ ಆರು ತಿಂಗಳ ಅವಧಿಗೆ ಹೆಚ್ಚುವರಿ ಕಾಲಾವಕಾಶ ಕೋರಿ ಮಾನ್ಯ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಸಂಖ್ಯೆ: IA 5/2023 ಅನ್ನು ಪರಿಗಣಿಸಿ ಮಾನ್ಯ ಉಚ್ಚ ನ್ಯಾಯಾಲಯವು ಆರು ತಿಂಗಳ ಅವಧಿಗೆ ಕಾಲಾವಕಾಶ ವಿಸ್ತರಿಸಿ ದಿನಾಂಕ 16.01.2024 ರಂದು ಆದೇಶಿಸಿರುತ್ತದೆ.
ದಿನಾಂಕ: 08.06.2024ರ ಪತ್ರದಲ್ಲಿ ಸದರಿ ಸಮಿತಿಯ ಅಧ್ಯಕ್ಷರಾದ ಆಯುಕ್ತರು, ಪಂಚಾಯತ್ ರಾಜ್, ಇವರಿಂದ ಸದರಿ ಸಮಿತಿಯ ವರದಿ ಹಾಗೂ ದಿನಾಂಕ: 31.12.2011ರಲ್ಲಿದ್ದಂತೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಟತಾ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ದಿನಾಂಕ: 31.12.2011ರಲ್ಲಿದ್ದಂತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಹಾಗೂ ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ಕರಡು ಜೇಷ್ಯತಾ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಪುಕಟಿಸಲಾಗಿದೆ. ಈ ಜೇಷ್ಟತಾ ಪಟ್ಟಿ ಕುರಿತು ಆಕ್ಷೇಪಣೆಗಳಿದ್ದಲ್ಲಿ, ಈ ಪುಕಟಣೆ ಹೊರಡಿಸಿದ 15 ದಿನಗಳೊಳಗಾಗಿ ತಮ್ಮ ಆಕ್ಷೇಪಣೆಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ (ಪಂ.ರಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು-01 ಇವರಿಗೆ ಇ-ಮೇಲೆ ವಿಳಾಸ: prs-pr@karnataka.gov.in ಅಥವಾ prspr.karnataka@gmail.com ಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ