ಬೆಂಗಳೂರು: ಕೆಲವು ನಾಯಕರು ನನ್ನ ಮುಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರ ಪ್ರಯತ್ನ ಅವರು ಮಾಡಲಿ. ನನ್ನ ಮೇಲೆ ಯಾವುದಾದರೂ ಕೇಸ್ ಇದೆಯಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಪ್ರಯತ್ನ ನಡೆಯುತ್ತಿದೆ. ಯಾವುದೋ ಹಳೇ ಕೇಸ್ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿಯನ್ನು ಹೇಗೆ ಮುಗಿಸಿಬೇಕು ಎಂಬುದು ಪ್ಲಾನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು.
ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ. ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ
BIG NEWS: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯ ಮಟ್ಟದ ‘PDO ಜೇಷ್ಟತಾ ಪಟ್ಟಿ’ ಪ್ರಕಟ