ಬೆಂಗಳೂರು : ನೀರಿನ ಶುದ್ಧತೆ ಮತ್ತು ಸುರಕ್ಷಿತತೆಯನ್ನು ಗ್ರಾಮ ಪಂಚಾಯಿತಿಯವರು ಖಾತ್ರಿಪಡಿಸಿಕೊಂಡು ಜನರಿಗೆ ಕುಡಿಯುವ ನೀರನ್ನು ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಪೋಟೆಬಲ್ ವಾಟರ್ ಕ್ವಾಲಿಟಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ಸುರಕ್ಷಿತ ನೀರನ್ನು ಗ್ರಾಮೀಣ ಜನರಿಗೆ ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದೆ. ಒಂದು ವೇಳೆ ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡುಬಂದಲ್ಲಿ ಜನರು ಏಕೀಕೃತ ಸಹಾಯವಾಣಿಗೆ ಅಥವಾ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಬೇಕು.
ಏಕೀಕೃತ ಸಹಾಯವಾಣಿ ಸಂಖ್ಯೆ-
9480985555
8277506000