ಮೈಸೂರು : ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆದಷ್ಟು ಬೇಗ ಜಿಲ್ಲಾ- ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ಬರೆದವರಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಿರುವುದು ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಇದರಿಂದ ಮೋಸವಾಗಲಿದೆ. ಹೀಗಾಗಿ ನೀಟ್ ಮರುಪರೀಕ್ಷೆ ನಡೆಸಬೇಕು. ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ಇನ್ನು ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಕಾನೂನು ರೀತಿ ಹೇಗೆ ತನಿಖೆಯಾಗಬೇಕು ಹಾಗೆಯೇ ಆಗುತ್ತದೆ, ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.