ಬೆಂಗಳೂರು: ಜೂನ್.17ರಂದು ಕೆ ಎಸ್ ಆರ್ ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆ, ದೇಹದಾರ್ಢ್ಯತೆ ಪರಿಶೀಲನೆ ನಡೆಸೋದಕ್ಕೆ ನಿಗದಿ ಪಡಿಸಲಾಗಿತ್ತು. ಆದ್ರೇ ಇದನ್ನು ಜೂನ್.18ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಇಂದು ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 14-02-2020ರಂದು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇರನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಎಂದಿದ್ದಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ದಿನಾಂಕ 17-06-2024ರಂದು ನಿಗಧಿಪಡಿಸಲಾಗಿದ್ದ ಮೂಲ ದಾಖಲಾತಿ, ದೇಹದಾರ್ಢ್ಯತೆ ಪರಿಶೀಲನೆಯನ್ನು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ದಿನಾಂಕ 18-06-2024ಕ್ಕೆ ಮುಂದೂಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SPPಯಾಗಿ ‘ಪಿ.ಪ್ರಸನ್ನ ಕುಮಾರ್’ ನೇಮಿಸಿ ಆದೇಶ
BREAKING: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ‘ಕೋಟಾ ಶ್ರೀನಿವಾಸ ಪೂಜಾರಿ’ ರಾಜೀನಾಮೆ