ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ಸಂಬಂಧ ಈಗಾಗಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಆಳ, ಅಗಲ, ವಿಸ್ತಾರ ಇನ್ನೂ ಜಾಸ್ತಿ ಇದೆ. ಸಿಬಿಐ ತನಿಖೆಗೆ ನೀಡಬೇಕು ಎಂಬುದಾಗಿ ಆಗ್ರಹಿಸಿ, ಕರ್ನಾಟಕ ಬಿಜೆಪಿ ಜೂನ್.28ರಂದು ರಾಜ್ಯಾಧ್ಯಂತ ಪ್ರತಿಭಟನೆ ನಿರ್ಧರಿಸಿದೆ.
ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ ನಡೆಯಿತು.
ಇಂದಿನ ಬಿಜೆಪಿ ಎಸ್ ಟಿ ಮೋರ್ಚಾ ಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ, ಅವ್ಯವಹಾರ ಸಂಬಂಧ ಬಿಸಿ ಬಿಸಿ ಚರ್ಚೆಯಾಯಿತು ಎಂಬುದಾಗಿ ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿನ ಸಭೆಯಲ್ಲಿ, ಜೂನ್.28ರಂದು ರಾಜ್ಯಾಧ್ಯಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಸಭೆಯಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್,ಪ್ರೀತಮ್ ಗೌಡ, ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ್,ಶ್ರೀಮತಿ ಹೇಮಲತಾ ನಾಯಕ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಭಾರತದಲ್ಲಿ ಈ ಆಹಾರಗಳ ಸೇವನೆ ನಿಷೇಧ : ಇಲ್ಲಿದೆ ನೋಡಿ ʻFSSAIʼ ನ ನಿಷೇಧಿತ ಆಹಾರಗಳ ಪಟ್ಟಿ | Banned Foods