ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚವಾಗುವ ಸಾಧ್ಯತೆ ಇದೆ.
ಭಾರತದಲ್ಲಿ ಈ ಆಹಾರಗಳ ಸೇವನೆ ನಿಷೇಧ : ಇಲ್ಲಿದೆ ನೋಡಿ ʻFSSAIʼ ನ ನಿಷೇಧಿತ ಆಹಾರಗಳ ಪಟ್ಟಿ | Banned Foods
BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ