ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಕರೆತಂದು, ಶೆಡ್ ಒಂದರಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ನಡೆಸಿ ಹತ್ಯೆಗೈದು, ಮೋರಿಗೆ ಮೃತದೇಹವನ್ನು ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಆರೋಪಿಗಳನ್ನು ಇಂದು ಪೊಲೀಸರು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕೋರಿಕೊಂಡ ಹಿನ್ನಲೆಯಲ್ಲಿ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಅಪಹರಿಸಿಕೊಂಡು ಬರಲಾಗಿತ್ತು. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ, ಮರ್ಮಾಂಗಕ್ಕೆ ಒದ್ದು ಹತ್ಯೆಗೈಯಲಾಗಿತ್ತು. ಆ ಬಳಿಕ ಮೋರಿಗೆ ಮೃತದೇಹವನ್ನು ಎಸೆಯಲಾಗಿತ್ತು. ಈ ಮೃತದೇಹವನ್ನು ಕಂಡಂತ ಡಿಲಿವರಿ ಬಾಯ್ ಒಬ್ಬರು ಕಾಮಾಕ್ಷಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ತೆರಳಿದ್ದಂತ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿ, ಆತನ ಬಗ್ಗೆ ಮಾಹಿತಿ ಕಲೆಹಾಕೋದಕ್ಕೆ ತೊಡಗಿದ್ದರು. ಮೋರಿಯಲ್ಲಿ ದೊರೆತ ಮೃತದೇಹ ರೇಣುಕಾಸ್ವಾಮಿ, ಚಿತ್ರದುರ್ಗ ಮೂಲದವರು ಎಂಬುದಾಗಿ ತಿಳಿದು ಬಂದಿತ್ತು. ಆತ ಮೆಡಿಕಲ್ ಸ್ಟೋರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಇದಲ್ಲದೇ ಶಾಕಿಂಗ್ ಎನ್ನುವಂತೆ ಆತನನ್ನು ಅಪಹರಿಸಿಕೊಂಡು ಬಂದಿದ್ದು ನಟ ದರ್ಶನ್ ಅಂಡ್ ಸಹಚರರು ಎಂಬುದು ತನಿಖೆ ನಡೆಸಿದಂತ ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಮೃತದೇಹ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊರೆತರೂ, ಆತನನ್ನು ಹೊಡೆದು ಹತ್ಯೆ ಮಾಡಿದ್ದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶೆಡ್ ಒಂದರಲ್ಲಿ ಆಗಿದ್ದರಿಂದ, ಪ್ರಕರಣ ಆ ಠಾಣೆಗೆ ವರ್ಗಾಣೆಗೊಂಡಿತ್ತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದಂತ ಪೊಲೀಸರು, 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.
ಚಿತ್ರದುರ್ಗ, ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬಂಧಿತ ಆರೋಪಿಯಾದಂತ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲರನ್ನು ಕರೆದೊಯ್ದಿದ್ದಂತ ಪೊಲೀಸರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಿದ್ದರು.
ಇಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲರ ಕಸ್ಟಡಿ ಅವಧಿ ಮುಗಿದಿತ್ತು. ಹೀಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಟ ದರ್ಶನ್ ಸೇರಿದಂತೆ ಎಲ್ಲರನ್ನೂ ಪೊಲೀಸರು ಹಾಜರುಪಡಿಸಿದರು. ಕೋರ್ಟ್ ಹಾಲ್ ಗೆ ರಾಜ್ಯ ಸರ್ಕಾರದಿಂದ ನೇಮಕಗೊಂಡಿದ್ದಂತ ಎಸ್ ಪಿಪಿ ಪಿ.ಪ್ರಸನ್ನ ಕುಮಾರ್ ಹಾಜರಿದ್ದರು.
ನಟ ದರ್ಶನ್, ಪವಿತ್ರಾ ಗೌಡ ಪರ ವಕೀಲರ ವಾದ, ಎಸ್ ಪಿಪಿ ಪ್ರಸನ್ನ ಕುಮಾರ್ ಪ್ರತಿವಾದವನ್ನು ಆಲಿಸಿದ ನಂತ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ 5 ದಿನ ಅಂದರೆ ಜೂನ್.20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್
Nitish Kumar Health: ಬಿಹಾರ ಮುಖ್ಯಮಂತ್ರಿ ‘ನಿತೀಶ್ ಕುಮಾರ್’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು