ಶಿವಮೊಗ್ಗ : ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ದೇಶ/ವಿದೇಶಿ ಪ್ರವಾಸಿಗರಿಗೆ ನೀಡಲು “ಒಂದು ರಾಜ್ಯ-ಹಲವು ವಿಸ್ಮಯಗಳು” ಎಂಬುದನ್ನು ಪರಿಚಯಿಸುವುದರ ಮೂಲಕ ಜಿಲ್ಲೆಯ ಭವ್ಯ ಸಂಸ್ಕøತಿ, ವೈವಿಧ್ಯತೆಗಳ ವಿಭಿನ್ನ ಕಲೆ-ವಾಸ್ತುಶಿಲ್ಪ ಹಾಗೂ ಜಿಲ್ಲೆಯ ಸಮಗ್ರತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ಸೆಳೆಯುವಂತಿರಬೇಕು.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್ 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಜುಲೈ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-251444 / 7019740132 ಗಳನ್ನು ಸಂಪರ್ಕಿಸುವುದು.
BREAKING: ‘ನಟಿ ಸಪ್ತಮಿ ಗೌಡ’ ಬಗ್ಗೆ ಮಾನಹಾನಿಕರ ಹೇಳಿಕೆ ನೀಡದಂತೆ ‘ಶ್ರೀದೇವಿ ಭೈರಪ್ಪ’ಗೆ ಕೋರ್ಟ್ ನಿರ್ಬಂಧಕಾಜ್ಞೆ
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್