ಉತ್ತರಾಖಂಡ : ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 26 ಜನರಿದ್ದ ಟೆಂಪೋ ಟ್ರಾವೆಲರ್ ಒಂದು ಅಲಕನಂದ ನದಿಗೆ ಉರುಳಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 14 ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಖಾಂಡಿನ ರುದ್ರಪ್ರಯಾಗದ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಅಲಕನಂದ ನದಿಗೆ ಟಿಟಿ ಉರುಳಿ ಬಿದ್ದು 14 ಪ್ರಯಾಣಿಕರ ಸಾವನ್ನಾಪ್ಪಿದ್ದರೆ. ಉತ್ತರಖಾಂಡಿನ ರುದ್ರ ಪ್ರಯಾಗದಲ್ಲಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ 14 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟೆಂಪೋ ಟ್ರಾವೆಲರ್ ನಲ್ಲಿ 26ಪ್ರಯಾಣಿಕರು ಎಂದು ತಿಳಿದುಬಂದಿದೆ.