ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ಬಿಜೆಪಿಗೆ ಕನ್ನಡಿಗರು ಮತ ಹಾಕಿದ್ದಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿ ಸೇಡು ತೀರಿಸಿಕೊಂಡಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು: ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಂತ ಕಿಡಿಕಾರಿದ್ದಾರೆ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ಗುಡುಗಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ಧರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಅಂತ ವಾಗ್ಧಾಳಿ ನಡೆಸಿದ್ದಾರೆ.
BREAKING: ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸಲ್ 3.5 ರೂ ಹೆಚ್ಚಳ | Petrol Price Hike
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್