ಬೆಂಗಳೂರು: ನಗರದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ನಗರದ ಜನತೆಗೆ ಸ್ವಚ್ಛ ನೀರು ಸರಬರಾಜು ಮಾಡುವು ಕೆಲಸ ಮಾಡಬೇಕು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡ ಅವರು, ಕಲುಷಿತ ನೀರಿನ ಬಗ್ಗೆ ಕೇಳಿದಾಗ “ಪ್ರತಿದಿನ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಜನರಿಗೆ ನೀಡಲಾಗುತ್ತಿದೆ. ಕಾವೇರಿ, ಬೋರ್ ವೆಲ್ ನೀರನ್ನು ಸಹ ಪರೀಕ್ಷೆಗೆ ಒಳಪಡಿಸುತ್ತಿದ್ದು. ದಿನದ ವರದಿ ನನಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು. ಪ್ರತಿದಿನವೂ ವರದಿ ನೀಡುತ್ತಿದ್ದಾರೆ ಎಂದರು.
ಬಿಬಿಎಂಪಿ ವಿಭಾಗಿಸುವ ಬಗ್ಗೆ ಬಿಜೆಪಿ ವಿರೋಧಿಸುತ್ತಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಸಮಿತಿಯ ವರದಿ ಇದೆ. ಸಧ್ಯಕ್ಕೆ 225 ವಾರ್ಡ್ ಗಳನ್ನು ಮಾಡಲಾಗಿದ್ದು, ಚುನಾವಣೆ ನಂತರವೂ ಬಿಬಿಎಂಪಿ ವಿಭಜನೆ ಮಾಡಬಹುದು. ಈಗಲೇ ಮಾಡಬೇಕೆಂದೇನಿಲ್ಲ” ಎಂದು ತಿಳಿಸಿದರು.
ಬಿಟ್ ಕಾಯಿನ್ ಹಗರಣ ಸಂಬಂಧ ನಲಪಾಡ್ ಅವರನ್ನು ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ” ಎಂದರು.
ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಕೇಳಿದಾಗ, “ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಾವು ಚುನಾವಣೆ ನಡೆಸಲೇಬೇಕು. ಹೀಗಾಗಿ ನಾವು ಎಲ್ಲಾ ಚುನಾವಣೆ ಮಾಡಲು ಬದ್ಧವಾಗಿದ್ದೇವೆ” ಎಂದರು.
‘BBMP ಚುನಾವಣೆ’ಗೆ ಬಿಗ್ ಅಪ್ ಡೇಟ್ ಕೊಟ್ಟ ‘ಡಿಸಿಎಂ ಡಿ.ಕೆ ಶಿವಕುಮಾರ್’ | BBMP Election
ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದ ಸರ್ಕಾರ: ಎಎಪಿ ಜಗದೀಶ್ ಆಕ್ರೋಶ