ಬೆಂಗಳೂರು : 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3)ರ ಏಕ ಕಡತದಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ ಪ್ರಾಥಮಿಕ ಶಾಲೆಗಳಿಗೆ ಅಗತ್ಯಾನುಸಾರ 1ನೇ ತರಗತಿಯಿಂದ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷ ಮಾಧ್ಯಮ) ಪ್ರಾರಂಭಿಸಲು ಈ ಹಿಂದೆ ನಿಗದಿಡಿಸಿದ ಮಾನದಂಡಗಳಂತೆ ಪ್ರಸ್ತಾವನೆ ಪಡೆದು ತಾಲ್ಲೂಕು / ಜಿಲ್ಲಾ / ವಿಭಾಗ ಹಂತದಲ್ಲಿ ಪರಿಶೀಲನಾ ಸಮಿತಿಗಳು ಪರಿಶೀಲಿಸಿ ಶಿಫಾರಸ್ಸು ಮಾಡಲು ಚೆಕ್ ಲಿಸ್ಟ್‌ನೊಂದಿಗೆ ವೇಳಾ ಪಟ್ಟಿ ನಿಗದಿಪಡಿಸಿ ಸುತ್ತೋಲೆ ಮೂಲಕ ಸೂಚಿಸಿದ್ದು, ಆದರಂತೆ ಸ್ವೀಕೃತವಾಗಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಒಟ್ಟು 1419 ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ :ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.
ಸದರಿ ಆದೇಶವನ್ನು ಯೋಜನಾ ಇಲಾಖೆಯ ಟಿಪ್ಪಣಿ ಸಂಖ್ಯೆ: PDS-MED/59/2024, ದಿನಾಂಕ:03.06.2024 ಮತ್ತು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 399 ವೆಚ್ಚ-8/2024, ದಿನಾಂಕ:10.06.2024ರನ್ವಯ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.