ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆನ್ನಲ್ಲೇ, ನಾಳೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಅಂತ ತಿಳಿಸಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ. ಬೆಲೆ ಏರಿಕೆ ಖಂಡಿಸಿ, ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬುದಾಗಿ ಹೇಳಿದೆ.
ಅಂದಹಾಗೇ ಇಂದು ಬಿಜೆಪಿ ಕೂಡ ಪ್ರತಿಭಟನೆ ನಡೆಸಿತ್ತು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ವಾಗ್ಧಾಳಿ ನಡೆಸಿದ್ದರು.
‘PG ಕೋರ್ಸ್’ಗೆ ಹೊಸ ಪಠ್ಯಕ್ರಮ ಮತ್ತು ಕ್ರೆಡಿಟ್ ಚೌಕಟ್ಟನ್ನು ಪರಿಚಯಿಸಿದ ‘UGC’ | PG Course
ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ