ಶಿವಮೊಗ್ಗ: ಸಾಗರ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮುಂದುವರೆಸಿದ್ದಾರೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ, ಬಿಸಿ ಮುಟ್ಟಿಸಿದ್ದಂತ ಅವರು, ನಾಳೆ ಸಾಗರ ತಾಲ್ಲೂಕು ವೈದ್ಯಾಧಿಕಾರಿಗಳು, ಹಾಸ್ಟೆಲ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ನಾಳೆ ಬೆಳಿಗ್ಗೆ 10.30ಕ್ಕೆ ತಾಲ್ಲೂಕು ವೈದ್ಯಾಧಿಕಾರಿಗಳ ಸಭೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಸಲಿದ್ದಾರೆ. ಈ ಸಭೆಯಲ್ಲಿ ತಾಲೂಕಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಈ ಸಭೆಯ ಬಳಿಕ ಬೆಳಿಗ್ಗೆ 11.30ಕ್ಕೆ ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿ ನಿಲಯಗಳ (ಹಾಸ್ಟೆಲ್) ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಮಸ್ಯೆ, ಅಹವಾಲುಗಳನ್ನು ಆಲಿಸಲಿರುವಂತ ಅವರು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಸೂಚಿಸೋ ಸಾಧ್ಯತೆ ಇದೆ.
ವರದಿ: ವಸಂತ ಬಿ ಈಶ್ವರಗೆರೆ
ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ
BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ