ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಎಸ್ಐಟಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಮತ್ತೆ 14 ದಿನಗಳ ಕಾಲ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ಅಧಿಕಾರಿಗಳು ತನ್ನನ್ನು ಚೆನ್ನಾಗಿ ನೋಡಿಕೊಂಡಿಲ್ಲ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ತೋರಿಸಿಲ್ಲ ಎಂಬುದಾಗಿ ನ್ಯಾಯಾಧೀಶರ ಮುಂದೆ ಆರೋಪಿಸಿದ್ದಾಗಿ ಹೇಳಲಾಗುತ್ತಿದೆ. ಹೀಗಾಗಿ ಎಸ್ಐಟಿ ಅಧಿಕಾರಿಗಳನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ ಎನ್ನಲಾಗಿದೆ.
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi
ಜಗತ್ತನ್ನು ಕಾಡಲಿದೆ ಕೊರೊನಾಗಿಂತ ಭಯಾನಕ ʻಸಾಂಕ್ರಾಮಿಕ ರೋಗ : ಶವಗಳಿಂದಲೇ ತುಂಬಿ ಹೋಗುತ್ತೆ ಭೂಮಿ!