ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಆದ್ರೇ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರಾಗಿದ್ದರು. ಈ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಜುಲೈ.12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. ಸಂಸದರಾಗುವ ಮೊದರು ಜಗದೀಶ್ ಶೆಟ್ಟರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಾಂಗ್ರೆಸ್ ಪಕ್ಷ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಸೇರಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಈಗ ಸಂಸದರು ಕೂಡ ಆಗಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಮನೆಯಲ್ಲಿದ್ದ ‘3 ಬೈಕ್’ ಪೊಲೀಸರು ವಶಕ್ಕೆ
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi