ಉತ್ತರ ಕನ್ನಡ: ಜಿಲ್ಲೆಯ ಬನವಾಸಿಯಲ್ಲಿ ಉಗ್ರರ ಜೊತೆಗೆ ನಂಟು ಹೊಂದಿದ್ದಂತ ಆರೋಪಿಯ ನಿವಾಸದ ಮೇಲೆ ಎನ್ಐಎ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ದಾಸನಕೊಪ್ಪದಲ್ಲಿನ ಅಬ್ದುಲ್ ಶುಕ್ಕೂರ್ ಎಂಬಾತನ ನಿವಾಸದ ಮೇಲೆ ಎನ್ಐಎ, ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಐವರು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಬ್ದುಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿದ್ದು ದೃಢಪಟ್ಟಿರೋದಾಗಿ ತಿಳಿದು ಬಂದಿದೆ.
ಅಬ್ದುಲ್ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟಕ ಪ್ರಕರಣ, ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದನು ಎನ್ನಲಾಗಿದೆ. ಅಲ್ಲದೇ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯ ಕೂಡ ಆಗಿದ್ದನಂತೆ.
ಬಕ್ರಿದ್ ಹಬ್ಬಕ್ಕಾಗಿ ಬನಸವಾಸಿಯ ದಾಸನಕೊಪ್ಪಕ್ಕೆ ಅಬ್ದುಲ್ ಬಂದಿದ್ದನು. ದುಬೈನಲ್ಲಿ ಕೆಲಸ ಮಾಡುತ್ತಿದ್ದಂತ ಅಬ್ದುಲ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಆನ್ ಲೈನ್ ಮೂಲಕ ಹೊಂದಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ಜುಲೈ.12ರಂದು ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi