ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಪಂಚ ಗ್ಯಾರಂಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಲ್ಲ. ಇದನ್ನು ಸಿಎಂ ಸಿದ್ಧರಾಮಯ್ಯ ಕೂಡ ಸ್ಪಷ್ಟ ಪಡಿಸಿದ್ದಾರೆ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ಪ್ರವಾಸಿ ಮಂದಿರದಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ಮೊದಲ ಬಜೆಟ್ ಅರ್ಧ ವಾರ್ಷಿಕ ಬಜೆಟ್ ಆಗಿದೆ. ಶಾಸಕರಿಗೆ ಬರುವ ಅನುದಾನ ಬಂದಿದೆ. ಈ ಸಾರಿ ಬಜೆಟ್ ನಲ್ಲಿ ಶಾಸಕರಿಗೆ ಮತ್ತಷ್ಟು ಅನುದಾನ ಸಿಗಲಿದೆ. ಶಾಸಕರಿಗೆ ನೀಡುವಂತ ಅನುದಾನದಲ್ಲಿ ಯಾವುದೇ ಕೊರತೆಯಾಗಿಲ್ಲ ಅಂತ ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಣಕ್ಕಾಗಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿಲ್ಲ. ಪಂಚ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಈಗಾಗಲೇ ಅನುದಾನ ಮೀಸಲಿಟ್ಟಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನದಲ್ಲಿ ಯಾವುದೇ ಕೊರತೆಯಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ‘ತೈಲ ಬೆಲೆ ಏರಿಕೆ’ ಸಮರ್ಥಿಸಿಕೊಂಡ ‘ಶಾಸಕ ಬೇಳೂರು ಗೋಪಾಲಕೃಷ್ಣ’
BREAKING : ಕುಡಿದು ವಾಹನ ಚಾಲನೆ ; ಜನಪ್ರಿಯ ಗಾಯಕ ‘ಜಸ್ಟಿನ್ ಟಿಂಬರ್ಲೇಕ್’ ಅರೆಸ್ಟ್