ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆಯುವ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು ನಿರ್ದೇಶನ ನೀಡಿದೆ.
ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು ರಾಜ್ಯ ಶಿಕ್ಷಣ ಸಂಂಶೋಧನೆ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ.
ಬ್ಯಾಗ್ ರಹಿತ ದಿನವವನ್ನು ಸಂಭ್ರಮ ಶನಿವಾರ ಎಂದು ಅನುಷ್ಠಾನಗೊಳಿಸಬೇಕು. ಈ ದಿನ ವಿದ್ಯಾರ್ಥಿಗಳು ಚಟುವಟಿಕೆ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್ ಇಆರ್ ಟಿ ವೆಬ್ ಸೈಟ್ ನಲ್ಲಿ dsert.karnataka.gov.in ನಲ್ಲಿ ಅಪ್ ಲೋಡ್ ಮಾಡಲಾಗಿದೆ.
ಇನ್ನು ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನ ತರಗತಿಗಳು ನಡೆಯುವುದರಿಂದ ಅರ್ಧ ದಿನ ಮಾತ್ರ ತರಗತಿ ನಡೆಯಯುವ ಪ್ರತಿ ತಿಂಗಳ ಮೂರನೇ ಶುಕ್ರವಾರ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚಿಸಲಾಗಿದೆ.