ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಸ್ಎಸ್ಎಫ್ ಜವಾನನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ.
ಬುಧವಾರ ಮುಂಜಾನೆ 5.25 ಕ್ಕೆ ಈ ಘಟನೆ ನಡೆದಿದೆ. ಮೃತ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ ಎನ್ನಲಾಗಿದೆ . 25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿಯಾಗಿದ್ದಾರೆ ಎನ್ನಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಇತರ ಸೈನಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು . ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎನ್ನಲಾಗಿದೆ.
ಘಟನ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ತಲುಪಿ ತನಿಖೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ. ಈಗ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎನ್ನಲಾಗಿದೆ.