ಬೆಂಗಳೂರು: ನಾಳೆ ಪರಪ್ಪನ ಅಗ್ರಹಾರಕ್ಕೆ ದರ್ಶನ್ ಅಂಡ್ ಗ್ಯಾಂಗ್ ಶಿಫ್ಟ್ ಮಾಡಲಾಗುವುದು ಎನ್ನಲಾಗಿದೆ. ನಾಳೆ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿ ಅವಧಿ ಮುಗಿಯಲಿದ್ದು, ಈ ನಿಟ್ಟಿನಲ್ಲಿ ಅವರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದು, ನಾಳೆ ಮತ್ತೆ ಪೊಲೀಸರು ತಮ್ಮ ವಶಕ್ಕೆ ಕೇಳುವ ಸಾಧ್ಯತೆ ಕಡಿಮೆ ಇದ್ದು, ನಾಳೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರಕ್ಕೆ ಸ್ಥಳತಾಂತರ ಮಾಡುವ ಸಾಧ್ಯತೆಯನ್ನು ಕೂಡ ತಳ್ಳಿ ಹಾಕುವಂತಿಲ್ಲ.
ಒಂದು ವೇಳೆ ನಾಳೆ ಪರಪ್ಪನ ಅಗ್ರಹಾರಕ್ಕೆ ಹೋದರೆ ದರ್ಶನ್ ಎರಡನೇ ಬಾರಿಗೆ ಅಲ್ಲಿ ತಮ್ಮ ದಿನಗಳನ್ನು ಕಳೆಯಲಿದ್ದಾರೆ. ಈ ನಡುವೆ ರೇಣುಕಸ್ವಾಮಿ ಹತ್ಯೆ ವೇಳೆ ನಟ ದರ್ಶನ್ ಧರಿಸಿದ್ದ ಬಟ್ಟೆ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೃತ್ಯ ನಡೆದ ಬಳಿಕ ಬಟ್ಟೆಯನ್ನು ಒಗೆದು ಒಣಗಿ ಹಾಕಲಾಗಿತ್ತು ಎನ್ನಲಾಗಿದೆ. ಆರ್ ಆರ್ ನಗರದಲ್ಲಿರುವ ದರ್ಶನ್ ಮನೆಯಿಂದ ಈ ಬಟ್ಟೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಸದ್ಯ ಬಟ್ಟೆಗಳನ್ನು ವಧಿ ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ತನಿಖೆಗಾಗಿ ಕಳುಹಿಕೊಟ್ಟಿದ್ದು, ಬಟ್ಟೆ ಮೇಲೆ ಇರುವ ಕಲೆಗಳನ್ನು ಪತ್ತೆಹಚ್ಚಲಾಗುವುದು ಎನ್ನಲಾಗಿದೆ