ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.
ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.
BREAKING: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ‘DNA’ ಪರೀಕ್ಷೆ: ವೈದ್ಯರಿಂದ ಸ್ಯಾಂಪಲ್ ಸಂಗ್ರಹ
BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi