ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು ವೇಳೆ ವಾಹನಗಳಿಗೆ ಈ ರೀತಿಯ ಹೆಡ್ ಲೈನ್ ಅಳವಡಿಸಿದ್ರೇ, ಕೇಸ್ ಹಾಕೋದಾಗಿ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.
ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ… pic.twitter.com/0Ir2nhkcdL
— DIPR Karnataka (@KarnatakaVarthe) June 19, 2024
BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024