ಬೆಂಗಳೂರು : ರಾಜ್ಯದಲ್ಲಿ ನೀಟ್ ಪರೀಕ್ಷೆ ರದ್ದು ಮಾಡುವ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನೀಟ್ ರದ್ದು ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀಟ್ ಪರೀಕ್ಷೆ ರದ್ದು ಮಾಡುವ ಕುರಿತು ಕಾನೂನಿನಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ನೀಟ್ ರದ್ದು ಮಾಡುವುದು ಕಾನೂನು ತೊಡಕಗಾಬಹುದು. ಸುಪ್ರೀಂಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ನೀಟ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಅತಂಕದಲ್ಲಿದ್ದಾರೆ. ಸೂಕ್ತ ಕ್ರಮ ಆಗಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನಿನ್ನೆ ನೆಟ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ದೇಶದ ಯುವಕರೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದು ಕಿಡಿಕಾರಿದ್ದಾರೆ.