ಹಾಸನ : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಾಡಹಗಲೇ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹೊಯ್ಸಳ ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿದ್ದ ಇಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.