Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ
KARNATAKA

ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬಳ್ಳಾರಿ: ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಈ ಮೂಲಕ ತೈಲ ಬೆಲೆ ಏರಿಕೆಯ ಬಗ್ಗೆ ಸ್ಪಷ್ಟನೆ ನೀಡಿದರು.

ಅವರು ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹೇಳುತ್ತಾರೆಯೇ? ಎಂದು ಪ್ರಶ್ನಿಸಿದ ಅವರು ಡೀಸಲ್ ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ವಿರೋಧ ಪಕ್ಷದವರು ಸಾರಿಗೆ ದರಗಳನ್ನು ಹೆಚ್ಚಿಸಲಾಗತ್ತದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ನರೇಂದ್ರ ಮೋದಿಯವರು ಕೇಂದ್ರ ಅಬಕಾರಿ ತೆರಿಗೆ 9.48 ರೂ. ಇದ್ದುದ್ದನ್ನು 32.98 ರೂ.ಗಳಿಗೆ ಏರಿಸಿದರು. ನಾವು ಮಾಡಿದೆವೋ ಅವರು ಹೆಚ್ಚು ಮಾಡಿದರು.

ಮನ್ ಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಇದ್ದಾಗ ಒಂದು ಬ್ಯಾರೆಲ್‍ಗೆ ಕಚ್ಛಾತೈಲಕ್ಕೆ 113 ಡಾಲರ್ ಇತ್ತು, ಈಗ ಎಷ್ಟಾಗಿದೆ ಎಂದು ತಿಳಿದುಕೊಳ್ಳಿ. 2015 ರಲ್ಲಿ 50 ಡಾಲರ್‍ಗೆ ಇಳಿದಾಗ ಬೆಲೆಯನ್ನು ಕಡಿಮೆ ಮಾಡಿದರೆ. ಒಮ್ಮೆ 27 ಡಾಲರ್‍ಗೆ ಕಚ್ಛಾತೈದ ಬೆಲೆ ಇಳಿದಿತ್ತು. ಆಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಿದರೆ? ಬಿಜೆಪಿ ಹೆಚ್ಚಿಸಿದರೆ ಮಾಧ್ಯಮದವರು ಸುಮ್ಮನಿರುತ್ತಾರೆ. ತಿಳಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ ಎಂದು ಹೇಳಿದರು.

ವಸ್ತುಸ್ಥಿತಿಯ ಮೇಲೆ ಆರೋಪ ಮಾಡಬೇಕು

ಆರೋಪಗಳನ್ನು ವಸ್ತುಸ್ಥಿತಿಯ ಮೇಲೆ ಮಾಡಬೇಕು ಎಂದರು. ನರೇಂದ್ರ ಮೋದಿಯವರು ಇದ್ದಾಗ ಒಂದು ಲೀಟರ್ ಪೆಟ್ರೋಲ್ ಬೆಲೆ 72 ರೂ.ಗಳಾಗಿತ್ತು. ಇಂದು 102 ರೂ.ಗಳಾಗಲು ಯಾರು ಕಾರಣ. ಒಂದು ಕಡೆ ಕಚ್ಛಾತೈಲದ ಬೆಲೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಹೆಚ್ಚು ಮಾಡಲಾಗಿದೆ. ಮನ್ಮೋಹನ್ ಸಿಂಗ್ ಅವರು ಇದ್ದಾಗ 103 ಕಚ್ಛಾತೈಲದ ಬೆಲೆ ಡಾಲರ್ ಬೆಲೆ ಇದ್ದಾಗ ಸಹಾಯಧನವನ್ನೂ ನೀಡಿ ಪೆಟ್ರೋಲ್ ಬೆಲೆಯನ್ನೂ ಇಳಿಸಿದ್ದರು. ನರೇಂದ್ರ ಮೋದಿಯವರ ಕಾಲದಲ್ಲಿ ಹೆಚ್ಚಾಗಿದೆ ಎಂದರು.

ರಾಜ್ಯದಲ್ಲಿ ಬೆಲೆಹೆಚ್ಚಾದರೂ ನೆರೆರಾಜ್ಯಗಳಿಗಿಂತ ಬೆಲೆ ಕಡಿಮೆ ಇದೆ

ನಾವು ಬೆಲೆಏರಿಕೆ ಮಾಡಿರುವುದು ಅಭಿವೃದ್ಧಿಗಾಗಿ. ಡೀಸಲ್ ಪೆಟ್ರೋಲ್ ಮೇಲೆ 3. ರೂ ಹೆಚ್ಚು ಮಾಡಿದರೂ ನೆರೆಯ ರಾಜ್ಯಗಳಿಗಿಂತಲೂ ಕಡಿಮೆ ಬೆಲೆ ಇದೆ. ವಾಹನ ಸಂಚಾರ ಹಾಗೂ ಪೆಟ್ರೋಲ್ ಡೀಸಲ್ ಹಾಕಿಸಿಕೊಳ್ಳುವುದು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಾಹನಗಳು ಹೋಗಬಾರದು ಎಂಬ ಕಾರಣಕ್ಕಾಗಿ ಎಂದರು.

ಗಣಿಗಾರಿಕೆಗೆ ಅನುಮತಿ ನೀಡಿರುವ ಬಗ್ಗೆ ಪರಿಶೀಲಿಸಲಾಗುವುದು

ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರಪ್ರೇಮಿಗಳು ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿ ಕೇಂದ್ರ ಸಚಿವ ಹೆಚ್.ಡಿ .ಕುಮಾರಸ್ವಾಮಿಯವರನ್ನು ಕೇಳಿ. ಒಂದು ಕಾಲದಲ್ಲಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ವಿಜಯನಗರ ಬಳ್ಲಾರಿ ಜಿಲ್ಲೆಯ ಕೆಲ ಶಾಸಕರು ಗಣಿಗಾರಿಕೆಯನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪರಿಶೀಲಿಸಲಾಗುವುದು ಎಂದರು.

ಕರ್ನಾಟಕ್ಕೆ ಅನ್ಯಾಯವಾಗಿರುವ ಬಗ್ಗೆ ಸಂಸದರು ಮಾತನಾಡಿಲ್ಲ

ಹಿಂದಿನ ಬಿಜೆಪಿ ಸರ್ಕಾರ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ಈ ಕುರಿತು ಪ್ರಯತ್ನ ಮಾಡಲಿದೆಯೇ ಎಂಬ ಬಗ್ಗೆ ಉತ್ತರಿಸಿ 16 ನೇ ಹಣಕಾಸು ಆಯೋಗ ಕೆಲಸ ಪ್ರಾರಂಭ ಮಾಡಿದೆ. ಆಯೋಗವು ಕೇಂದ್ರ ಹಾಗೂ ನಮಗೆಷ್ಟು ಬರಬೇಕೆಂದು ಹಂಚಿಕೆ ಮಾಡುತ್ತದೆ. 14 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಿಂದ ನಮಗೆ ಅನ್ಯಾಯವಾಗಿದೆ. ನಮಗೆ 1 ಲಕ್ಷ 87 ಸಾವಿರ ಕೋಟಿ ನಷ್ಟವಾಗಿದೆ. ತೆರಿಗೆ ಹಂಚಿಕೆ ಹಾಗೂ ತೆರಿಗೆ ಹಂಚಿಕೆಯಾಗುವ ವ್ಯಾಪ್ತಿ ಕೂಡ ಕಡಿಮೆಯಾಯಿತು. ಸೆಸ್ ಹಾಗೂ ಸರ್ಚಾಜ್ ಹೆಚ್ಚು ವಸೂಲು ಮಾಡಲು ಪ್ರಾರಂಭಿಸಿದರು. ಸೆಸ್ ಹಾಗೂ ಸರ್ಚಾಜ್ ನಲ್ಲಿ ನಮಗೆ ಪಾಲು ಬರುವುದಿಲ್ಲ. ಕೇಂದ್ರವೇ ಇಟ್ಟುಕೊಳ್ಳುತ್ತದೆ. ಕರ್ನಾಟಕ್ಕೆ ಅನ್ಯಾಯವಾಗಿರುವ ಬಗ್ಗೆ ಬಳ್ಳಾರಿ ಸೇರಿದಂತೆ ಒಬ್ಬ ಸಂಸದರೂ ಬಾಯಿ ಬಿಟ್ಟಿಲ್ಲ. ಆರು ತಿಂಗಳಾದರೂ ಕೂಡ ಬರ ಪರಿಹಾರ ಕೊಡದಿದ್ದಾಗಲೂ ಒಬ್ಬರೂ ಬಾಯಿ ಬಿಡಲಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಡೆಹಾಕಿದ್ದರಿಂದ 15 ನೇ ಹಣಕಾಸು ಆಯೋಗ 5495 ಕೋಟಿ ರೂ.ಗಳನ್ನು ರಾಜ್ಯಕ್ಕೆ ಕೊಡಲಿಲ್ಲ. ಆಗಲಾದರೂ ಸಂಸದರು ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಬೆಂಗಳೂರಿನ ಪೆರಿಫೆರಲ್ ರಿಂಗ್ ರೋಟ್ ಹಾಗೂ ಕೆರೆಗಳ ಅಭಿವೃದ್ಧಿಗೆ 6000 ಕೋಟಿ ರೂ.ಗಳನ್ನು ಕೊಟ್ಟರೇ? ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದರು, ಕೊಟ್ಟರೇ? ಇದನ್ನೆಲ್ಲ ಕೇಳುವವ್ಯಾರು? ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ನಮ್ಮ ಡಿ.ಕೆ.ಸುರೇಶ್ ಒಬ್ಬರೇ ಕೇಳಿದ್ದು. ಕೇಳಿದ್ದಕ್ಕೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು. ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಏನೇನು ಮಾತನಾಡಿದ್ದಾರೆ ಎಂದು ಹೇಳಲೇ? ತೆರಿಗೆ ಡೀಸಲ್ ಬಗ್ಗೆ ಏನು ಹೇಳಿದ್ದಾರೆ ಎಂದು ಹೇಳಲೆ ಎಂದು ಸಿಎಂ ಮಾಧ್ಯಮದವರಿಗೆ ಮರುಪ್ರಶ್ನಿಸಿದರು.

ಮೂರು ರಾಜ್ಯಗಳ ಮಧ್ಯೆ ಮಾತುಕತೆ

ಕೊಪ್ಪಳ ತಾಲ್ಲೂಕಿನ ನವಲೆಯಲ್ಲಿ ತುಂಗಭದ್ರಾ ಬ್ಯಾಲೆನ್ಸಿಂಗ್ ರಿಸರ್ವಾಂiÀiರ್ ನಿರ್ಮಾಣದ ಬಗ್ಗೆ ಮಾತನಾಡಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದ ಮಧ್ಯೆ ಮಾತುಕತೆ ಪ್ರಾರಂಭ ಮಾಡಿ ಡಿಪಿಆರ್ ಮಾಡಿಸಲಾಗುವುದು ಎಂದರು.

 

ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆ ‘ಡಾರ್ಕ್ ನೆಟ್’ನಲ್ಲಿ ಸೋರಿಕೆ: ಪರೀಕ್ಷೆ ರದ್ದತಿ ಕುರಿತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ | UGC-NET paper leaked

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.