ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರೇಣುಕಾಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ ಎಂದು ಪೊಲೀಸ್ ರಿಮ್ಯಾಂಡ್ ಕಾಪಿಯಲ್ಲಿ ಬಯಲಾಗಿದೆ.
ಬಂಧಿತ ಎ1 ಆರೋಪಿ ಪವಿತ್ರಾ ಗೌಡ ಅವರೇ, ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಂಚುಕೋರರು. ನಟ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಪ್ರಚೋದನೆ ನೀಡಿ ಕೊಲೆ ಮಾಡಿಸಿರುವುದು ಸದ್ಯದ ತನಿಖೆಯಿಂದ ತಿಳಿದುಬಂದಿದೆ. ಆರೋಪಿ ಮೊಬೈಲ್‌ನಲ್ಲಿ ಮಹತ್ವದ ಪುರಾವೆ ಪತ್ತೆಯಾಗಿದ್ದು, ‘ಕೊಲೆ ಪ್ರಕರಣದ ಆರೋಪಿಯೊಬ್ಬನ ಮೊಬೈಲ್‌ನಲ್ಲಿ ಮಹತ್ವದ ಪುರಾವೆ ಇದೆ. ಅದನ್ನು ಆರೋಪಿಗೆ ಕಳುಹಿಸಿದವರು ಯಾರು ಎಂಬ ಬಗ್ಗೆ ಮಾಹಿತಿ ತಿಳಿಯಲು ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
ಎ1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣ ಕರ್ತೆಯಾಗಿದ್ದು ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಸಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ. ಎ2 ಆರೋಪಿಯು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೊಗ ಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡು ಬಂದಿರುತ್ತದೆ ಎಂದು ರಿಮ್ಯಾಂಡ್ ಕಾಪಿಯಲ್ಲಿ ಮಾಹಿತಿ ಬಹಿರಂಗವಾಗಿದೆ.