ಬೆಂಗಳೂರು: ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್-ನವೆಂಬರ್ನಲ್ಲಿ ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಸ್ವೀಕೃತ ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು. ನಂತರ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ವಹಿಸಲಿವೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.