ಮಂಡ್ಯ: ನಟ ದರ್ಶನ್ ಕೊಲೆ ಮಾಡುವಷ್ಟು ಕಟುಕನಲ್ಲ ಎಂದು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಮಾತನಾಡಿ. ನನಗೆ ಹಲವು ವರ್ಷಗಳಿಂದ ದರ್ಶನ್ ಸ್ನೇಹಿತನಾಗಿದ್ದು, ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲಾ. ನಾನು ನೋಡಿದಂತೆ ಆತ ಕೊಲೆ ಮಾಡುವಷ್ಟು ಕ್ರೂರಿಯಲ್ಲ. ಅವರ ಜೊತೆಗಿರುವವರು ಮಾಡಿ ಇವರ ಮೇಲೆ ಏನಾದ್ರು ಹಾಕಿದ್ರಾ ಗೊತ್ತಿಲ್ಲ. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು ಅಂಥ ಹೇಳಿದರು.
ಇನ್ನೂ ದರ್ಶನ್ ಮತ್ತು ಸಹಚರರು ನನ್ನ ಗನ್ಮ್ಯಾನ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು. ನನಗೆ ಐದಾರು ಮಂದಿ ಗನ್ ಮ್ಯಾನ್ ಇದ್ದಾರೆ. ಹಲ್ಲೆ ಮಾಡಿದ್ದರೆ ನನಗೆ ಗೊತ್ತಾಗುತ್ತಿರಲಿಲ್ವೇ ಆ ರೀತಿ ಏನೂ ಆಗಿಲ್ಲ. ಅದೆಲ್ಲವೂ ಸುಳ್ಳು ಅಂಥ ಅವರು ಇದೇ ವೇಳೆ ಹೇಳಿದರು.