ಬೆಂಗಳೂರು : ಇಂದು ಬೆಂಗಳೂರು ಮೈಸೂರು ಸೇರಿದಂತೆ ಸುಮಾರು 11 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಬೆಂಗಳೂರು ಹಾಗೂ ಮೈಸೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಯು ಬಿ ಸಿಟಿಯ ಕಿಂಗ್ ಫಿಷರ್ ಟವರ್, ಮಲ್ಲೇಶ್ವರಂ, ಬಸವೇಶ್ವರ ನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಸೇರಿದಂತೆ 11 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.