ರಾಮನಗರ: ನಾನು ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ. ಪೋಡಿ, ಜಮೀನು ಖಾತೆ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ವಸತಿ ರಹಿತರ ಸಮಸ್ಯೆ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಪಿಂಚಣಿ ಸಮಸ್ಯೆ, ರಸ್ತೆ ದುರಸ್ತಿ, ಬಸ್ ವ್ಯವಸ್ಥೆ, ದೇವಾಲಯ ಜೀರ್ಣೋದ್ಧಾರ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಯೋಜನೆಗಳ ಸಮಸ್ಯೆ, ಪೊಲೀಸರಿಂದ ತೊಂದರೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನಮಗೆ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ. ಈ ಯೋಜನೆ ಮೂಲಕ ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಇದಾಗಿದೆ. ಬೇರೆ ಪಕ್ಷಕ್ಕೆ ಮತಹಾಕಿದ್ದೇನೆ, ಬೇರೆ ಪಕ್ಷದ ಜತೆ ಗುರುತಿಸಿಕೊಂಡಿದ್ದೇನೆ. ಶಿವಕುಮಾರ್ ಬಳಿ ಹೋಗಿ ಹೇಗೆ ಅರ್ಜಿ ನೀಡಲಿ ಎಂಬ ಮುಜುಗರ, ಹಿಂಜರಿಕೆ ಬೇಡ. ನಾವು ಎಲ್ಲರ ಸಮಸ್ಯೆಗಳನ್ನೂ ಆಲಿಸಿ ಸ್ಪಂದಿಸುತ್ತೇವೆ ಎಂದರು.
ತಾಲ್ಲೂಕಿನ ಗ್ರಾಮೀಣ ಭಾಗದ ಜನರು ವಿದ್ಯಾಭ್ಯಾಕ್ಕಾಗಿ, ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದಾರೆ. ಹೀಗಾಗಿ ಮಾಜಿ ಸಂಸದ ಸುರೇಶ್ ಅವರು ಸಿ ಎಸ್ ಆರ್ ನಿಧಿಯಲ್ಲಿ ರಾಮನಗರದ 20 ಕಡೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸಧ್ಯದಲ್ಲೇ ಈ ಶಾಲೆಗಳ ನಿರ್ಮಾಣ ಆರಂಭವಾಗಲಿದೆ. ಕೆಲವರು ಮಾತಲ್ಲೇ ಮನೆ ಕಟ್ಟುವ ಪ್ರಯತ್ನ ಮಾಡುತ್ತಾರೆ. ನಾನು ಶ್ರಮದಿಂದ ಭದ್ರ ಅಡಿಪಾಯ ಹಾಕಿ ಮನೆ ಕಟ್ಟುವವನು. ನಾವು ಭಾವನೆ ಮೇಲೆ ರಾಜಕೀಯ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಿ ನಿಮ್ಮ ಬದುಕು ಹಾಸನ ಮಾಡುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಧಾನಸಭೆ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಉಚಿತ ಬಸ್ ಪ್ರಯಾಣ, ತಿಂಗಳಿಗೆ 2 ಸಾವಿರ, ಉಚಿತ ವಿದ್ಯುತ್, ಐದು ಕೆ.ಜಿ ಅಕ್ಕಿ, ಐದು ಕೆ.ಜಿ ಅಕ್ಕಿ ಹಣ ನೀಡಲಾಗುತ್ತಿದೆ. ಯಾರಿಗೆ ಈ ಸೌಲಭ್ಯ ಸಿಗುತ್ತಿಲ್ಲ ಅವರು ಅರ್ಜಿ ಹಾಕಿ ಎಂದು ಹೇಳಿದರು.
ರಾಜ್ಯದ ‘ಎಲ್ಲಾ ಅಂಗನವಾಡಿ’ಗಳನ್ನು ಉನ್ನತೀಕರಣಕ್ಕೆ ‘ಸಿಎಂ ಸಿದ್ಧರಾಮಯ್ಯ’ ಸಮ್ಮತಿ: LKG, UKG ಆರಂಭಕ್ಕೂ ಸಹಮತ
BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ