ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ (20) ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶವನ್ನು ಹೊರಡಿಸಲಾಗಿದೆ.
ಪದ್ಮನಾಭನಗರದ ಬೃಂದಾವನ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಪ್ರಬುದ್ಧ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕೃತ್ಯ ಎಸಗಿದ್ದ ಆರೋಪದಡಿ ಅವರ ತಮ್ಮನ ಸ್ನೇಹಿತನಾಗಿರುವ ಬಾಲಕನನ್ನು ಸೆರೆ ಹಿಡಿದಿದ್ದರು. ಆರೋಪಿ ಬಾಲಕ, ಪ್ರಬುದ್ಧಾ ಅವರ ಪರ್ಸ್‌ನಿಂದ ₹ 2 ಸಾವಿರ ಕಳ್ಳತನ ಮಾಡಿದ್ದ. ಇದು ಗೊತ್ತಾಗುತ್ತಿದ್ದಂತೆ, ಹಣ ವಾಪಸು ನೀಡುವಂತೆ ಪ್ರಬುದ್ಧಾ ಒತ್ತಾಯಿಸಿದ್ದರು. ಇದೇ ಕಾರಣಕ್ಕೆ ಬಾಲಕ, ಪ್ರಬುದ್ಧಾ ಅವರನ್ನು ಕೊಲೆ ಮಾಡಿದ್ದಾನೆ ಎನ್ನುವುದು ತನಿಖೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ. ಈ ನಡುವೆ ಈಗ ರಾಜ್ಯ ಸರ್ಕಾರ ಪ್ರಕರಣವನ್ನು CID ವಹಿಸಿದೆ.