ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ ನೀಡಿದ್ದಾರೆ.
ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಉಗ್ರಾಣಗಳಲ್ಲಿ ಶುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು. ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.