ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದು, ಇದೀಗ ದರ್ಶನ್ ಅಭಿಮಾನಿಯೊಬ್ಬನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ನಿರ್ಮಾಪಕ ಉಮಾಪತಿಗೌಡರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ಅಭಿಮಾನಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 504, 506 ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಚೇತನ್ ನನ್ನು ಬಂಧಿಸಿದ್ದಾರೆ. ಈ ವೇಳೆ ಉಮಾಪತಿಗೌಡಗೆ ಚೇತನ್ ಕ್ಷಮೆ ಕೇಳಿದ್ದಾನೆ.