ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದೆ. ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎನ್ನುವ ಕೂಗು ಕೇಳಿ ಬಂದಿದೆ. ಇದಕ್ಕೆ ಸಕಾರಾತ್ಮಕವಾಗೇ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡೋದಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಇಂದು ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದಂತ ರೇಣುಕಾಸ್ವಾಮಿ ಅವರ ತಂದೆ, ತಾಯಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡರು. ಜೊತೆಗೆ ಪೊಲೀಸ್ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು.
ಇದೇ ಸಂದರ್ಭದಲ್ಲಿ ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗೇ ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
15 ನಿಮಿಷಗಳಲ್ಲಿ 25,000 ಅಡಿ ಎತ್ತರಕ್ಕೆ ಬಿದ್ದ ‘ಕೊರಿಯನ್ ವಿಮಾನ’ | 13 ಪ್ರಯಾಣಿಕರು ಆಸ್ಪತ್ರೆಗೆ ದಾಖಲು
BIG NEWS : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ಇಂದು ಸೂರಜ್ ರೇವಣ್ಣ ವೈದ್ಯಕೀಯ ಪರೀಕ್ಷೆ | Suraj Revanna