ನವದೆಹಲಿ: ಇಂದು ಸಿಬಿಐ ಅಧಿಕಾರಿಗಳು ತಿಹಾರ್ ಜೈಲಿನಲ್ಲಿ ಇರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು. ಆ ಬಳಿಕ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನಂತ್ರ, ಸಿಬಿಐ ಅಧಿಕಾರಿಗಳು ಸಿಎಂ ಅರವಿದ್ ಕೇಂಜ್ರಿವಾಲ್ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.
ಇಂದು ತಿಹಾರ್ ಜೈಲಿನಿಂದಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವಂತ ಸಿಬಿಐ ಅಧಿಕಾರಿಗಳು, ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಅಂದಹಾಗೇ ಈಗಾಗಲೇ ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣ ಸಂಬಂಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ. ಇಂದು ಮತ್ತೆ ಸಿಬಿಐ ವಿಚಾರಣೆಯ ನಂತ್ರ, ತಿಹಾರ್ ಜೈಲಿನಿಂದಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
Central Bureau of Investigation examined Delhi CM Arvind Kejriwal in Tihar Jail on Monday and recorded his statement related to the Excise Policy case. CBI also got permission for Arvind Kejriwal's production before the concerned trial court tomorrow. He will be produced before…
— ANI (@ANI) June 25, 2024
‘ಅಂಗನವಾಡಿ ಕಾರ್ಯಕರ್ತೆ’ಯರನ್ನು ಖಾಯಂ, ಇದು ಕಾಂಗ್ರೆಸ್ ಸರ್ಕಾರದ ‘6ನೇ ಗ್ಯಾರಂಟಿ’: ಶಾಸಕ ಬೇಳೂರು ಗೋಪಾಲಕೃಷ್ಣ