ಮೈಸೂರು : ಸಿಎಂ ಬೆಂಗಾವಲು ವಾಹನಕ್ಕೆ ಬೈಕ್ ಸವಾರನಿಂದ ಅಡಚಣೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಬರಳ್ಳಿ ನಿವಾಸಿ ಶಿವು ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೂನ್. 23 ರಂದು ಏರ್ಪೋರ್ಟ್ನಿಂದ ನಜರಾಬಾದ್ಗೆ ಸಿಎಂ ಸಿದ್ದರಾಮಯ್ಯನವರು ಹೊರಟಿದ್ದರು. ಮೈಸೂರು ನಂಜನಗೂಡು ಹೆದ್ದಾರಿಯಲ್ಲಿ ಈ ವೇಳೆ ಬ್ಯಾರಿಕೆಡ್ ಅಳವಡಿಕೆ ಮಾಡಲಾಗಿತ್ತು. ಪೊಲೀಸರು ಸೂಚಿಸಿದ್ದರು ಕೂಡ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ. ಸಿಎಂ ಬರುತ್ತಿದ್ದ ಮಾರ್ಗದಲ್ಲಿ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ.
ಈ ವೇಳೆ ಬೈಕ್ ಸವಾರ ಶಿವುನನ್ನು ತಡೆಯಲು ಮುಂದಾದ ಪೊಲೀಸರಿಗೆ ಆರೋಪಿ ಶಿವು ಡಿಕ್ಕಿ ಹೊಡೆದಿದ್ದಾನೆ. ನಂತರ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಶಿವುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇದೀಗ ಶಿವು ವಿರುದ್ಧ FIR ದಾಖಲಾಗಿದೆ.